ಚಿಕ್ಕೋಡಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕಬ್ಬಿಣದ ರಾಡ್ನಿಂದ ಯುವಕನೊಬ್ಬನ ತಲೆಗೆ ಹೊಡೆದು ಕೊಲೆ ಮಾಡಿ ಮೃತದೇಹವನ್ನು ನಾಲೆಗೆ ಎಸೆದಿರುವ ಘಟನೆ ಬೆಂಡೆವಾಡ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೆಂಡವಾಡ ಗ್ರಾಮದ ಅರ್ಜುನ ಮಾರುತಿ ನಗಾಡೆ (30) ಕೊಲೆಯಾದ ವ್ಯಕ್ತಿ. ಇವರು ಕಳೆದ ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಹೀಗಾಗಿ ರಾಯಭಾಗ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗಿನ ಜಾವ ಅರ್ಜುನ ಮಾರುತಿ ನಗಾಡೆ ಶವ ಗೋಕಾಕ ತಾಲೂಕಿನ ಕಾಲುವೆಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಸಿಕ್ಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.