ಬೆಳಗಾವಿ:ತನ್ನಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ದುಂಡಯ್ಯಾ ನಂದಿಕೊಳ್ಳಮಠ (42) ಕೊಲೆಯಾದ ವ್ಯಕ್ತಿ.
ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಕೊಲೆ.. ರಾತ್ರಿ ಹೆಂಡತಿಯ ತವರಿಗೆ ಬಂದಿದ್ದ ವ್ಯಕ್ತಿ ಹೆಣವಾದ! - murder cases of Belgavi
ವ್ಯಕ್ತಿಯೋರ್ವ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದ ವೇಳೆ ತಡರಾತ್ರಿ ಯಾರೋ ಅಪರಿಚಿತರು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ.
ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆ..!
ಮೃತ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಹೆಂಡತಿ ಮನೆಗೆ ಬಂದಿದ್ದನಂತೆ. ಈ ವೇಳೆ ತಡರಾತ್ರಿ ಯಾರೋ ಅಪರಿಚಿತರು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗೋಕಾಕ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಶಿಗ್ಗಾವಿಯಲ್ಲಿ ಚಿನ್ನಿದಾಂಡು ಆಟದ ವೇಳೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ