ಬೆಳಗಾವಿ: ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ, ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವಿದ್ದರೂ ಬೆಳಗಾವಿಯ ಸರ್ದಾರ್ ಸರ್ಕಾರಿ ಪ್ರೌಢ ಶಾಲೆಯ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಶಾಲೆಗೆ ಬಂದ ನಂತರ ಹಿಜಾಬ್ ತೆಗೆಸುತ್ತಿರುವ ಶಾಲಾ ಸಿಬ್ಬಂದಿ ಜೊತೆಗೆ ಸಾಮಾಜಿಕ ಹೋರಾಟಗಾರ್ತಿ ಓರ್ವರು ವಾಗ್ವಾದ ನಡೆಸಿದ್ದಾರೆ.
ಇಂದು ಕೂಡ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಬಂದಿದ್ದರು. ಆ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಗೆ ಕರೆದೊಯ್ಯುತ್ತಿರುವ ಸಿಬ್ಬಂದಿ ಹಿಜಾಬ್ ತೆಗೆಸಿ ನಂತರ ತರಗತಿಗೆ ಕಳುಹಿಸುತ್ತಿದ್ದಾರೆ.
ಈ ಹಿನ್ನೆಲೆ, ಮಕ್ಕಳು ಧರಿಸಿರುವ ಹಿಜಾಬ್ ಅನ್ನು ಏಕೆ ತೆಗೆಸುತ್ತಿದ್ದೀರಾ? ಎಂದು ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಮದಾರ್ ಶಾಲಾ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾರೆ.