ಕರ್ನಾಟಕ

karnataka

ETV Bharat / city

ಬೆಳಗಾವಿ: ನಿಪ್ಪಾಣಿ ಖಾಸಗಿ ಪಿಯು ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೋವಿಡ್ - ನಿಪ್ಪಾಣಿ ಖಾಸಗಿ ಪಿಯು ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೋವಿಡ್

ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ, ಇತರ ವಿದ್ಯಾರ್ಥಿಗಳಿಗೂ ಕೋವಿಡ್ ಆರ್​ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೊರೊನಾ ಜಾಗೃತಿ ಮೂಡಿಸಲಾಗುತ್ತಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಹಶೀಲ್ದಾರ್ ಅವರು​ ಧೈರ್ಯ ಹೇಳಿದ್ದಾರೆ.

belagavi
ಕೋವಿಡ್

By

Published : Jan 13, 2022, 1:18 PM IST

ಚಿಕ್ಕೋಡಿ(ಬೆಳಗಾವಿ):ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದ ಖಾಸಗಿ ಪಿಯು ಕಾಲೇಜಿನ 18 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಧೃಢಪಟ್ಟಿದೆ. ಈ ಹಿನ್ನೆಲೆ ಕಾಲೇಜಿಗೆ ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸೋಂಕಿತ ವಿದ್ಯಾರ್ಥಿಗಳಿಗೆ ಹೋಂ ಐಸೋಲೇಷನ್​ಗೆ ಸೂಚಿಸಲಾಗಿದೆ.

ನಿಪ್ಪಾಣಿಯಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸೋಂಕು ತಗುಲಿದ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಗುಣಲಕ್ಷಣಗಳಿಲ್ಲ. ಹೀಗಾಗಿ ಸೋಂಕಿತ ವಿದ್ಯಾರ್ಥಿಗಳನ್ನು ಹೋಂ ಐಸೋಲೇಷನ್‌ಗೆ ಒಳಗಾಗಲು ಸೂಚನೆ ನೀಡಲಾಗಿದೆ.

ಇದಲ್ಲದೇ, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ, ಇತರ ವಿದ್ಯಾರ್ಥಿಗಳಿಗೂ ಕೋವಿಡ್ ಆರ್​ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೊರೊನಾ ಜಾಗೃತಿ ಮೂಡಿಸಲಾಗುತ್ತಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಹಶೀಲ್ದಾರ್​ ಧೈರ್ಯ ಹೇಳಿದ್ದಾರೆ.

ಇದನ್ನೂ ಓದಿ:ಮೇಕೆದಾಟು ಪಾದಯಾತ್ರೆ ಎಫೆಕ್ಟ್​: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿಗೆ ಕೋವಿಡ್

For All Latest Updates

ABOUT THE AUTHOR

...view details