ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿದ್ದರೂ ನಗರದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಹೊರರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಯಾವುದೇ ಆರೋಗ್ಯ ತಪಾಸಣೆ ನಡೆಸದೆ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ. ಇದು ಇಲ್ಲಿನ ಜನರನ್ನು ಆತಂಕಕ್ಕೀಡು ಮಾಡಿದೆ.
ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ 25ಕ್ಕೂ ಹೆಚ್ಚು ರೈಲುಗಳು ಬೆಂಗಳೂರು, ಗೋವಾ, ರಾಜಸ್ಥಾನ, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಮೂಲೆಗಳಿಂದ ಆಗಮಿಸುತ್ತವೆ. ಈ ರೈಲುಗಳಲ್ಲಿ ಸಾವಿರಾರು ಜನರು ಬೆಳಗಾವಿಗೆ ಬರುತ್ತಾರೆ. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ರಾಜ್ಯಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಆದರೆ, ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಪರಿಣಾಮ ತಪಾಸಣೆಯಿಲ್ಲದೇ ನೂರಾರು ಜನರು ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಕೊರೊನಾ ಆತಂಕ ಹೆಚ್ಚುತ್ತಿದೆ.