ಬೆಳಗಾವಿ: ಬಿಜೆಪಿ ಶಾಸಕ ಉಮೇಶ್ ಕತ್ತಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಕತ್ತಿ ಸಹೋದರರ ಜತೆಗೆ ಗುರುತಿಸಿಕೊಂಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಈಗ ಯೂಟರ್ನ್ ಹೊಡೆದಿದ್ದಾರೆ.
ಕತ್ತಿ ಆಯೋಜಿಸುವ ಮುಂದಿನ ಸಭೆಯಲ್ಲಿ ನಾನು ಭಾಗಿಯಾಗಲ್ಲ: ಅನಿಲ್ ಬೆನಕೆ ಯೂಟರ್ನ್ - ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಬಳಗ
ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಬಳಗದಲ್ಲಿ ಗುರುತಿಸಿಕೊಂಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಈಗ ಯೂಟರ್ನ್ ತೆಗೆದುಕೊಂಡಿದ್ದಾರೆ. ಕತ್ತಿ ಆಯೋಜಿಸುವ ಮುಂದಿನ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕತ್ತಿ ಆಯೋಜಿಸುವ ಮುಂದಿನ ಸಭೆಯಲ್ಲಿ ನಾನು ಭಾಗಿಯಾಗಲ್ಲ: ಅನಿಲ್ ಬೆನಕೆ ಯೂಟರ್ನ್
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಆಯೋಜಿಸುವ ಮುಂದಿನ ಸಭೆಯಲ್ಲಿ ನಾನು ಭಾಗಿಯಾಗಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕತ್ತಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಅನಿಲ್ ಬೆನಕೆ ಅವರನ್ನು ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ರೇಗಿಸಿದ್ದರು. 'ನಮಸ್ಕಾರ ಶಾಸಕರೆ, ಮುಖಂಡರೆ" ಎಂದು ರೇಗಿಸಿದ್ದರು. ಈಗ ಏಕಾಏಕಿ ಉಮೇಶ್ ಕತ್ತಿ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಅನಿಲ್ ಬೆನಕೆ ಪ್ರತಿಕ್ರಿಯೆ ನೀಡಿದ್ದಾರೆ.