ಚಿಕ್ಕೋಡಿ: ಕಳೆದ ಎರಡು ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಸದಲಗಾ ಪೊಲೀಸರು ಬಂಧಿಸಿದ್ದಾರೆ.
ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್ - ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಸದಲಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
One Arrest
ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆ ಇಚಲಕರಂಜಿ ಪಟ್ಟಣದ ಪ್ರಶಾಂತ ರಾವಸಾಹೇಬ ಮಸ್ಕರ (29) ಬಂಧಿತ ಅರೋಪಿ. ಈತ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದ ಬಾಹುಬಲಿ ಮಹಾವೀರ ಕೂಗೆ ಅವರ ಮನೆಯ ಬಾಗಿಲು ಮುರಿದು ನಗದು ಸೇರಿದಂತೆ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ.
ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಜೊತೆಗೆ ಬಂಗಾರದ ಲಕ್ಷ್ಮಿ ಹಾರ ಸೇರಿದಂತೆ ವಿವಿಧ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.