ಚಿಕ್ಕೋಡಿ:ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸಪ್ಪನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಅಂಕಲಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದ ಚಿಕ್ಕೋಡಿ ರಸ್ತೆಯ ಕೇರೂರ ಕ್ರಾಸ್ ಬಳಿ ವಾಹನಗಳನ್ನು ತಡೆದು ನಕಲಿ ಪೊಲೀಸ್ ಒಬ್ಬ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ಅನುಮಾನ ಬಂದ ವಾಹನ ಸವಾರರು ಮತ್ತು ಸ್ಥಳೀಯರು ವಿಚಾರಿಸಿದಾಗ ಈತ ನಕಲಿ ಪೊಲೀಸ್ ಎಂಬ ವಿಚಾರ ಬೆಳಕಿಗೆ ಬಂದಿದೆ. ಆಗ ಎಲ್ಲರೂ ಸೇರಿ ಆತನಿಗೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.