ಕರ್ನಾಟಕ

karnataka

ETV Bharat / city

ಎಪಿಎಂಸಿ ಮಾರುಕಟ್ಟೆಯಲ್ಲಿ ಕೋವಿಡ್​ ನಿಯಮ ಗಾಳಿಗೆ ತೂರಿದ ಜನತೆ

ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೆ ವಹಿವಾಟು ನಡೆಸುತ್ತಿದ್ದಾರೆ.

Belgaum APMC Market
ಎಪಿಎಂಸಿ ಮಾರುಕಟ್ಟೆಯಲ್ಲಿ ಕೋವಿಡ್​ ನಿಯಮ ಗಾಳಿಗೆ ತೂರಿದ ಜನತೆ

By

Published : Apr 21, 2021, 12:44 PM IST

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಕೋವಿಡ್ ನಿಯಮ ಗಾಳಿಗೆ ತೂರಿದ್ದಾರೆ.

ಎಪಿಎಂಸಿ ಮಾರುಕಟ್ಟೆ ಜನಜಂಗುಳಿ

ನಗರದ ಕಂಗ್ರಾಳಿಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ವರ್ತಕರು ಮತ್ತು ರೈತರು ದಂಡಕ್ಕೆ ಹೆದರಿ ಪಾಲಿಕೆ ಮಾರ್ಷಲ್​ಗಳು ಬಂದಾಗ ಮಾತ್ರ ಮಾಸ್ಕ್​ ಧರಿಸುತ್ತಾರೆ. ಉಳಿದ ಸಮಯದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದಾರೆ. ಸಾರ್ವಜನಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೆ ವ್ಯವಹಾರ ನಡೆಸುತ್ತಿದ್ದಾರೆ‌.

ಜಿಲ್ಲಾಡಳಿತ ಕಳೆದೊಂದು ವಾರದ ಹಿಂದೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಎಪಿಎಂಸಿ ಮಾರುಕಟ್ಟೆಯನ್ನು ವಿಭಜನೆ ಮಾಡುವುದಾಗಿ ಹೇಳಿತ್ತು. ಆದರೆ, ಈವರೆಗೂ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಎಪಿಎಂಸಿ ಮಾರುಕಟ್ಟೆ ವಿಭಜಿಸಿ, ನಾಲ್ಕು ದಿಕ್ಕುಗಳಲ್ಲಿ ವ್ಯಾಪಾರ ನಡೆಸಲಾಗುತ್ತಿತ್ತು. ಆದರೆ, ಈ ವರ್ಷ ಕೊರೊನಾ ಎರಡನೇ ಅಲೆ ಜೋರಾಗಿದ್ದರೂ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ:ಆಸ್ಪತ್ರೆಯಲ್ಲಿ ಬೆಡ್​ಗೆ ಪರದಾಟ, ಚಿತಾಗಾರದಲ್ಲೂ 'ಹೆಣ'ಗಾಟ: ಬೆಂಗಳೂರಿನಲ್ಲಿ ಪರಿಸ್ಥಿತಿ ಗಂಭೀರ

ABOUT THE AUTHOR

...view details