ಅಥಣಿ:ಬೆಳಗಾವಿ ಜಿಲ್ಲೆ ಅಥಣಿ ಕಾಗವಾಡ ಅವಳಿ ತಾಲೂಕುಗಳಲ್ಲಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟ ಪರಿಣಾಮ ಅಪಘಾತಗಳು ಸಾಮಾನ್ಯವಾಗಿವೆ. ವಿಜಯಪುರ ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿದ್ದನ್ನು ಸ್ಥಳೀಯರು ನೋಡಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಅಥಣಿ ಕಾಗವಾಡ ತಾಲೂಕಿನಲ್ಲಿ ಸರಿಯಾಗಿ ರಸ್ತೆ ಇಲ್ಲದೇ ಅಪಘಾತ ಸಂಭವಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿರುದ್ಧವೂ ಕಿಡಿಕಾರಿದ್ದಾರೆ. ನಿತ್ಯ ಅಪಘಾತದಿಂದ ರೈತರು, ವಾಹನ ಸವಾರರಿಗೆ ತೊಂದರೆ ಎದುರಾಗಿದೆ. ರಸ್ತೆ ಸರಿ ಮಾಡಿ, ಇಲ್ಲವಾದರೆ ಮನೆಯಲ್ಲಿ ಇದ್ದು ಬಿಡಿ ಎಂದು ಆಗ್ರಹಿಸಿದ್ದಾರೆ.