ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಬೈಕ್ ರ‍್ಯಾಲಿಗೆ ಪಟ್ಟು: ನೂರಾರು ಮಂದಿ ಕರವೇ ಕಾರ್ಯಕರ್ತರು ಪೊಲೀಸ್​​ ವಶಕ್ಕೆ

Belagavi riots: ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಸೇರಿದ್ದ ನೂರಾರು ಕರವೇ ಕಾರ್ಯಕರ್ತರು ‌ಬೈಕ್ ರ‍್ಯಾಲಿ ನಡೆಸುವುದಾಗಿ ಪಟ್ಟು ಹಿಡಿದಿದ್ದರು. ರ‍್ಯಾಲಿಗೆ ಅವಕಾಶ ನೀಡದ ಪೊಲೀಸರು ನೂರಾರು ಕಾರ್ಯಕರ್ತರನ್ನು‌ ವಶಕ್ಕೆ ಪಡೆದಿದ್ದಾರೆ.

police detained   Karave activist
ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

By

Published : Dec 19, 2021, 12:07 PM IST

ಬೆಳಗಾವಿ: ನಗರದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀರನವಾಡಿಯಲ್ಲಿ ಪ್ರತಿಭಟನೆ‌ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್ ರ‍್ಯಾಲಿಗೆ ಮುಂದಾದ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಸೇರಿದ್ದ ನೂರಾರು ಕರವೇ ಕಾರ್ಯಕರ್ತರು ‌ಬೈಕ್ ರ‍್ಯಾಲಿ ನಡೆಸುವುದಾಗಿ ಪಟ್ಟು ಹಿಡಿದಿದ್ದರು. ರ‍್ಯಾಲಿಗೆ ಅವಕಾಶ ನೀಡದ ಪೊಲೀಸರು ನೂರಾರು ಕಾರ್ಯಕರ್ತರನ್ನು‌ 3 ಸಾರಿಗೆ ಬಸ್​​ಗಳಲ್ಲಿ ತುಂಬಿಕೊಂಡು ಬೇರೆಡೆ ಕರೆದುಕೊಂಡು ‌ಹೋಗಿದ್ದಾರೆ.

ರಾಯಣ್ಣ ಮೂರ್ತಿ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ. ಹೀಗಾಗಿ ಪೊಲೀಸರು ಕರವೇ ಕಾರ್ಯಕರ್ತರ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡೋದನ್ನ ಸಹಿಸಲ್ಲ: ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ

ABOUT THE AUTHOR

...view details