ಬೆಳಗಾವಿ: ಪೊಲೀಸ್ ಕಮಿಷನರೇಟ್ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಿಲ್ಲಾ ಕವಾಯತು ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಐಜಿಪಿ ರಾಘವೇಂದ್ರ ಸುಹಾಸ್ ಅನಾವರಣಗೊಳಿಸಿದರು.
ಪೊಲೀಸ್ ಧ್ವಜ ದಿನ: ಗಮನ ಸೆಳೆದ ಆಕರ್ಷಕ ಪಥ ಸಂಚಲನ - Police flag day celebrated in belgavi
ಬೆಳಗಾವಿ ಜಿಲ್ಲಾ ಕವಾಯತು ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಐಜಿಪಿ ರಾಘವೇಂದ್ರ ಸುಹಾಸ್ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಇಲಾಖೆಯಲ್ಲಿ ಶೌರ್ಯ, ಸಾಹಸದ ಮೂಲಕ ಜವಾಬ್ದಾರಿ ತೋರಿದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಗೌರವ ನೀಡುವ ಕಾರ್ಯಕ್ರಮ ಇದಾಗಬೇಕು. ತುರ್ತು ಸಂದರ್ಭದಲ್ಲಿ ಜನರಿಗೆ ನೆರವಾಗುವ ಮೂಲಕ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನವನ್ನು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಠಾಣೆಯಲ್ಲಿ ಸ್ಪಂದನೆ ಜೊತೆಗೆ ಸಹಾಯ ನೀಡಬೇಕು ಎಂದರು.
ಇನ್ನು ವಿವಿಧ ಠಾಣೆಗಳ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿಯ ಡಿಸಿಆರ್ಇ ನಿವೃತ್ತ ಪೊಲೀಸ್ ಅಧೀಕ್ಷಕ ಆರ್.ಆರ್.ಕಲ್ಯಾಣಶೆಟ್ಟಿ, ನಿವೃತ್ತ ಪಿಎಸ್‍ಐ ಅಮೃತ ಹೊಸಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಉಪಸ್ಥಿತರಿದ್ದರು.