ಬೆಳಗಾವಿ: ಹಿಜಾಬ್ ವಿವಾದದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ. ಇದರ ನಡುವೆಯೇ ಇಂದಿನಿಂದ ಜಿಲ್ಲೆಯಲ್ಲಿ ಕಾಲೇಜುಗಳು ಪುನರಾರಂಭವಾಗಿವೆ. ನಗರದ ಎಲ್ಲ ಕಾಲೇಜುಗಳ ಎದುರು ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಹಿಜಾಬ್ ತಗೆದು ತರಗತಿಗೆ ಹಾಜರು:ಅಹಿತಕರ ಘಟನೆ ನಡೆಯದಂತೆ ಬೆಳಗಾವಿ ಪೊಲೀಸರು ಮುಂಜಾಗ್ರತಾ ಕ್ರಮ ತಗೆದುಕೊಂಡಿದ್ದಾರೆ. ಸರ್ದಾರ್ ಸರ್ಕಾರಿ ಕಾಲೇಜಿಗೆ ಖಡೇಬಜಾರ್ ಸಿಪಿಐ ನೇತೃತ್ವದಲ್ಲಿ ಭದ್ರತೆ ನೀಡಲಾಗಿದೆ. ಸಮವಸ್ತ್ರ ನೀತಿ ಪಾಲಿಸುವಂತೆ ನ್ಯಾಯಾಲಯ, ಸರ್ಕಾರದ ಆದೇಶವಿದ್ದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜು ಆವರಣ ಪ್ರವೇಶಿಸುತ್ತಿದ್ದಾರೆ. ಕಾಲೇಜಿನ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತಗೆದು ನಂತರ ತರಗತಿಗೆ ಹಾಜರಾಗುತ್ತಿದ್ದಾರೆ.