ಬೆಳಗಾವಿ: ಜಿಲ್ಲೆಯಲ್ಲಿ ಸೀಲ್ ಡೌನ್ ವಿಚಾರದಲ್ಲಿಯೂ ರಾಜಕೀಯ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಅದಕ್ಕೆ ಪುಷ್ಟಿ ಎಂಬಂತೆ ಮಹಾನಗರ ಪಾಲಿಕೆ ಸಿಬ್ಬಂದಿ ಡಿಸಿಎಂ ಲಕ್ಷ್ಮಣ ಸವದಿ ಮನೆಗೆ ಸಂಪರ್ಕ ಒದಗಿಸುವ ರಸ್ತೆಯನ್ನು ಸೀಲ್ ಡೌನ್ ಮಾಡದೇ ಹಾಗೆ ಬಿಟ್ಟಿದ್ದಾರೆ ಎನ್ನಲಾಗ್ತಿದೆ.
ಸದಾಶಿವ ನಗರದಲ್ಲಿ ರಸ್ತೆಯೊಂದರ ಅಪಾರ್ಟ್ಮೆಂಟ್ನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆ ಪ್ರದೇಶದ ಸುತ್ತಲೂ 50 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಬೇಕಿತ್ತು. ಆದ್ರೆ, ಕೊರೊನಾ ಸೋಂಕಿತ ಪತ್ತೆಯಾದ ಪ್ರದೇಶ ಬಳಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮನೆ ಇದೆ. ಹೀಗಾಗಿ ಪಾಲಿಕೆ ಅಧಿಕಾರಿಗಳು ಸವದಿ ಮನೆಗೆ ಹೋಗುವ ರಸ್ತೆಯನ್ನು ಸೀಲ್ ಡೌನ್ ಮಾಡದೇ ಹಾಗೆಯೇ ಬಿಟ್ಟಿದ್ದಾರೆ. ಕೊರೊನಾ ಸೋಂಕಿತನ ಮನೆ, ಅಕ್ಕಪಕ್ಕದ ಹಾಗೂ ಮುಂದಿನ 10 ಮೀಟರ್ನಷ್ಟು ರಸ್ತೆಯನ್ನು ಮಾತ್ರ ಸೀಲ್ಡೌನ್ ಮಾಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾನ್ಯ ಜನರಿಗೊಂದು, ಉಳ್ಳವರಿಗೊಂದು ಎಂಬ ನ್ಯಾಯ ಎಂಬಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.