ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪೂರ ಗ್ರಾಮದ ಅಂಚೆ ಕಚೇರಿ ಸಿಬ್ಬಂದಿ ಸ್ವಾತಂತ್ರ್ಯ ದಿನವನ್ನು ಆಚರಿಸದೆ ಅವಮಾನ ಮಾಡಿದ್ದಾರೆ ಎಂದು ಗ್ರಾಮದ ಯುವಕರು ಆರೋಪಿಸಿದ್ದಾರೆ.
ಅಂಚೆ ಕಚೇರಿ ಮುಂದೆ ಧ್ವಜಾರೋಹಣ ಮಾಡದೆ ಸಿಬ್ಬಂದಿ ನಿರ್ಲಕ್ಷ್ಯ
ಸ್ವಾತಂತ್ರ್ಯ ದಿನವನ್ನು ಆಚರಿಸದ ಅಂಚೆ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ನಾಮದೇವ ಕಾಂಬಳೆ ಆಗ್ರಹಿಸಿದ್ದಾರೆ.
ಧ್ವಜಾರೋಹಣ ಮಾಡದೆ ಅಂಚೆ ಸಿಬ್ಬಂದಿ ನಿರ್ಲಕ್ಷ್ಯ
ತಮಗೂ, ಸ್ವಾತಂತ್ರ್ಯ ದಿನಕ್ಕೂ ಸಂಬಂಧವಿಲ್ಲದಂತೆ ಸಿಬ್ಬಂದಿ ವರ್ತಿಸಿದ್ದಾರೆ. ಕಚೇರಿಯಲ್ಲಿ ಧ್ವಜಾರೋಹಣ ಮಾಡದ ಪರಿಣಾಮ ಸಂವಿಧಾನದ ಮೂಲಭೂತ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಸ್ವಾತಂತ್ರೋತ್ಸವ ದಿನದಂದು ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ, ಇದಕ್ಕೆ ಕ್ಯಾರೆನ್ನದ ಸಿಬ್ಬಂದಿ ವಿರುದ್ಧ ಮೇಲಾಧಿಕಾರಿಗಳು ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ನಾಮದೇವ ಕಾಂಬಳೆ ಒತ್ತಾಯಿಸಿದ್ದಾರೆ.
Last Updated : Aug 15, 2020, 6:30 PM IST