ಬೆಳಗಾವಿ: ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಾಲ್ಮೀಕಿ ಸಮುದಾಯದ ಹೋರಾಟಗಾರರು ನಾಗಮೋಹನ್ ದಾಸ್ ವರದಿ ಜಾರಿ ಹಾಗೂ 7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ವಾಗ್ವಾದ ನಡೆದಿದ್ದು, ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡುಸಕೊಪ್ಪ ಪ್ರತಿಭಟನಾ ಟೆಂಟ್ಗೆ ಕರೆದುಕೊಂಡು ಹೋದರು.