ಬೆಳಗಾವಿ: ಧಾರಾಕಾರ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಗೆ ಮನವಿ ಪತ್ರ ಸಲ್ಲಿಸಿದರು.
ಮಳೆಗೆ ಹಾನಿಯಾದ ಕುಟುಂಬಗಳಿಗೆ ತ್ವರಿತ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ - flood news
ಧಾರಾಕಾರ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಗೆ ಮನವಿ ಪತ್ರ ಸಲ್ಲಿಸಿದರು.
ಭಾರೀ ಮಳೆಗೆ ಸಾಕಷ್ಟು ಮನೆಗಳು ನೆಲಕ್ಕುರುಳಿದ್ದು, ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅಂತಹ ಕುಟುಂಬಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ವಿತರಣಾ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಮನೆ ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮನೆ ಕಳೆದುಕೊಂಡವರು ಪರಿಹಾರ ಪಡೆಯಲು ಸೂಕ್ತ ದಾಖಲೆಗಳನ್ನು ನೀಡಬೇಕಾಗಿದೆ. ಆದರೆ ಮನೆ ಜೊತೆಗೆ ಅನೇಕರು ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಇನ್ನೂ ಹಲವು ಜನರಿಗೆ ಮನೆಯ ನೋಂದಣಿ ಸೇರಿದಂತೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಸಂತ್ರಸ್ತರಿಗೆ ಹತ್ತಿರವಿರುವ ದಾಖಲೆ ಪಡೆದುಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.