ಬೆಳಗಾವಿ: ಡ್ರಗ್ಸ್ ಮಾಫಿಯಾದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶ್ರೀರಾಮ ಸೇನೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಡ್ರಗ್ಸ್ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಜೊತೆಗೆ ಶಾಲಾ-ಕಾಲೇಜುಗಳ ಪರಿಸರದಲ್ಲಿ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು ಎಂದು ಶ್ರೀರಾಮ ಸೇನೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿ ಬೆಳೆದಿದೆ. ಈಗಾಗಲೇ ಅನೇಕ ಜನರನ್ನು ಬಂಧಿಸಲಾಗಿದ್ದು, ತನಿಖೆ ಕೂಡ ನಡೆಯುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಡ್ರಗ್ಸ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ದೇಶದ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜೊತೆಗೆ ಶಾಲಾ-ಕಾಲೇಜುಗಳ ಪರಿಸರದಲ್ಲಿ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಡ್ರಗ್ಸ್ ಪತ್ತೆಯಾಗುವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಠಾಣಾಧಿಕಾರಿ ಮತ್ತು ಎಸ್ಪಿಯನ್ನು ಜವಾಬ್ದಾರರನ್ನಾಗಿಸಬೇಕು, ಪಬ್, ಲೈವ್ ಬ್ಯಾಂಡ್, ಸ್ಟಾರ್ ಹೋಟೆಲ್ಗಳಲ್ಲಿ ನಿರಂತರ ತಪಾಸಣೆ ಮಾಡಬೇಕು. ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಸೂಕ್ತ ತನಿಖೆ ನಡಸಬೇಕು. ಚಿತ್ರರಂಗದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿರುವುದಿಂದ ತನಿಖೆಗೆ ವಿಶೇಷ ತಂಡ ರಚಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.