ಬೆಳಗಾವಿ: ರಾಸಲೀಲೆ ಪ್ರಕರಣ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸ್ವಕ್ಷೇತ್ರ ಗೋಕಾಕ್ನಲ್ಲಿ ಇಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಸಚಿವರ ರಾಸಲೀಲೆ ಪ್ರಕರಣ: ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಸ್ವಕ್ಷೇತ್ರದಲ್ಲಿ ಪ್ರತಿಭಟನೆಗೆ ನಿರ್ಧಾರ - Ramesh Jarkiholi Sex Scandal
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ಬಹಿರಂಗಗೊಂಡ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಗೋಕಾಕ್ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲು ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ.

ಜೆಡಿಎಸ್ ನಾಯಕ ಅಶೋಕ್ ಪೂಜಾರಿ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ಧರಣಿ ನಡೆಯಲಿದೆ.
ಈ ಕುರಿತು 'ಈಟಿವಿ ಭಾರತ' ಜೊತೆ ಮಾತನಾಡಿದ ಅಶೋಕ ಪೂಜಾರಿ, ರಾಜ್ಯದಲ್ಲಿ ಈ ಹಿಂದೆ ಇಂತಹ ಪ್ರಕರಣ ಬೆಳಕಿಗೆ ಬಂದಾಗ ಹಲವು ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲಿ ನೀಲಿ ಚಿತ್ರ ನೋಡಿದ್ದ ಅಂದಿನ ಸಚಿವರಾಗಿದ್ದ ಲಕ್ಷ್ಮಣ ಸವದಿ ಸೇರಿದಂತೆ ಮೂವರು ಸಚಿವರು ರಾಜೀನಾಮೆ ನೀಡಿದ್ದರು. ಇದೀಗ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕಾರಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.