ಅಥಣಿ: ಕೃಷ್ಣಾ ನದಿಗೆ ಅಡ್ಡಲಾಗಿ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ ಜಲ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬ್ಯಾರೇಜ್ ಕೃಷ್ಣಾ ನದಿ ನೀರು ಹೆಚ್ಚಾಗುತ್ತಿದ್ದಂತೆ ಜಲಾವೃತವಾಗಿವೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತದ ಆತಂಕಕ್ಕೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಾಜಾಪುರ ದಿಂದ ಕೃಷ್ಣಾನದಿಗೆ 10ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.