ಕರ್ನಾಟಕ

karnataka

ETV Bharat / city

ಸಂತೋಷ್​ ಪಾಟೀಲ್ ಆತ್ಮಹತ್ಯೆ: ಸಿಬಿಐ ತನಿಖೆಗೆ ಪಂಚಮಸಾಲಿ ಸಮುದಾಯ ಆಗ್ರಹ - ಈಶ್ವರಪ್ಪ ಕುರಿತು ರಾಜಶೇಖರ ಮೆಣಸಿನಕಾಯಿ ಪ್ರತಿಕ್ರಿಯೆ

ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ಮಾಡಲಾಗುತ್ತದೆ ಎಂದು ರಾಜಶೇಖರ ಮೆಣಸಿನಕಾಯಿ ತಿಳಿಸಿದರು.

Rajashekar Menasinakayi reacts on santhosh patil suicide case
ಲಿಂಗಾಯತ ಪಂಚಮಸಾಲಿ ಸಂಘಟನೆಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ರಾಜಶೇಖರ ಮೆಣಸಿನಕಾಯಿ

By

Published : Apr 13, 2022, 4:39 PM IST

ಬೆಳಗಾವಿ: ಗುತ್ತಿಗೆದಾರ ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ಮಾಡಲಾಗುತ್ತದೆ. ಈ ಬಗ್ಗೆ ಸಮುದಾಯದ ಉಭಯ ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಸಂಘಟನೆಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ರಾಜಶೇಖರ ಮೆಣಸಿನಕಾಯಿ ಹೇಳಿದರು.


ನಗರದಲ್ಲಿ ಮಾಧ್ಯಮದವರೊಂದಿಗೆ ‌ಮಾತನಾಡಿದ ಅವರು, ನಮ್ಮ ಸಮುದಾಯದ ಯುವಕನಿಗೆ ಅನ್ಯಾಯವಾಗಿದೆ. ಈ ಹಿಂದೆ‌ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದಾಗ ಅದನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಈಗ ಕಮಿಷನ್‌ಗಾಗಿ ಈ ಯುವಕ ಬಲಿಯಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಚಿವ ಈಶ್ವರಪ್ಪಗೆ ಕಾಂಗ್ರೆಸ್​ ಮುತ್ತಿಗೆ ಯತ್ನ, ಬಿಜೆಪಿಯಿಂದ ವಿರೋಧ

ಯುವಕ ಮಾನಸಿಕವಾಗಿ ಬಹಳಷ್ಟು ಸದೃಢವಾಗಿದ್ದ. ಆದ್ರೆ ಸ್ವಾಭಿಮಾನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು, ಮಗುವಿನ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಕುಟುಂಬಕ್ಕೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು. ಇದೇ ವೇಳೆ, ಈಶ್ವರಪ್ಪನವರ ರಾಜೀನಾಮೆಯೊಂದೇ ಪರಿಹಾರ ಅಲ್ಲ. ಕಾನೂನು ಪ್ರಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.

For All Latest Updates

ABOUT THE AUTHOR

...view details