ಬೆಳಗಾವಿ: ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಲು ರೈತರು ಮುಗಿಬಿದ್ದಿದ್ದರು.
ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಸಂಭ್ರಮಾಚರಣೆ ಬೇಡ: ರಮೇಶ್ ಜಾರಕಿಹೊಳಿ - ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಸಂಭ್ರಮಾಚರಣೆ ಬೇಡ
ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಲು ರೈತರು ಮುಗಿಬಿದ್ದರು. ಈ ವೇಳೆ ಮಾತನಾಡಿದ ಸಚಿವರು, ದೇಶದ ಎಲ್ಲ ರೈತರು ಒಂದೇ. ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆ ಇದೆ. ಅಲ್ಲಿಯವರೆಗೂ ಕಾದು ನೋಡೋಣ ಎಂದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿರುವ ಕಣಕುಂಬಿಗೆ (ಫೆ.29) ರಂದು ಭೇಟಿ ನೀಡುತ್ತೇನೆ. ಕೇಂದ್ರ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಕೇವಲ ರಾಜ್ಯದ ರೈತರ ಗೆಲುವು ಮಾತ್ರವಲ್ಲದೇ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ರೈತರ ಗೆಲುವಾಗಿದೆ. ಎಲ್ಲರೂ ನಮ್ಮ ರೈತರೇ ಎಂದರು.
ಸುಪ್ರೀಂ ಕೋರ್ಟ್ನಲ್ಲಿ ಮತ್ತೆ ಮಹದಾಯಿ ನದಿ ನೀರು ಹಂಚಿಕೆ ವಿಷಯ ವಿಚಾರಣೆಗೆ ಬರುತ್ತಿದೆ. ಇನ್ನು ಒಂದು ವಾರದವರೆಗೆ ಯಾರು ಸಂಭ್ರಮ, ಆಚರಣೆ ಮಾಡಬಾರದು ಎಂದು ರೈತರಲ್ಲಿ ರಮೇಶ್ ಜಾರಕಿಹೊಳಿ ಮನವಿ ಮಾಡಿದರು. ಸೋಮವಾರ ಮಹದಾಯಿ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದೆ. ಹಾಗಾಗಿ ಮಹದಾಯಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.