ಕರ್ನಾಟಕ

karnataka

ETV Bharat / city

'ಸಂತೋಷ್ ಆತ್ಮಹತ್ಯೆ ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ' - Ramesh Jarkiholi on d k shivakumar

'ನನ್ನ ಸಿಡಿ ಕೇಸ್​​ನಲ್ಲೂ ಆ ಮಹಾನಾಯಕನ ತಂಡ ಇದೆ. ಇದೇ ತಂಡ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲೂ ಕೆಲಸ ಮಾಡಿದೆ' ಎಂದು ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

Ramesh Jarkiholi
ರಮೇಶ್ ಜಾರಕಿಹೊಳಿ‌

By

Published : Apr 14, 2022, 2:55 PM IST

Updated : Apr 14, 2022, 3:11 PM IST

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ‌ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ‌ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ್ ಪಾಟೀಲ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.


ಈ ಬಗ್ಗೆ ನನ್ನ ಬಳಿ‌ ದಾಖಲೆಗಳಿವೆ. ಇದನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನಮ್ಮ ನಾಯಕರು ಅನುಮತಿ ನೀಡಿದರೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬಾರದು. ನನ್ನ ಹಾಗು ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ರಮೇಶ್‌ ಜಾರಕಿಹೊಳಿ ಆಗ್ರಹಿಸಿದರು. ಇದಕ್ಕೂ ಮೊದಲು ಬಡಸ್ ಗ್ರಾಮದಲ್ಲಿ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಹೂವಿನ ಹಾರ ಅರ್ಪಿಸಿದರು.

ಇದನ್ನೂ ಓದಿ:ಗುತ್ತಿಗೆದಾರ ಆತ್ಮಹತ್ಯೆ ಕೇಸ್​.. ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್​ ಧರಣಿ

Last Updated : Apr 14, 2022, 3:11 PM IST

ABOUT THE AUTHOR

...view details