ಬೆಳಗಾವಿ: ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಅತೀ ಸರಳ ರೀತಿಯಲ್ಲಿ ಆಚರಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರಿಂದ ಡಿಸಿಗಳಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿಯಲ್ಲಿ ದಸರಾ ಹಬ್ಬದ ಆಚರಣೆಗೆ ಅವಕಾಶ ನೀಡುವಂತೆ ಶಾಸಕ ಅನಿಲ್ ಬೆನಕೆ ಮನವಿ - ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ
ಬೆಳಗಾವಿ ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಅತೀ ಸರಳ ರೀತಿಯಿಂದ ಆಚರಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರಿಂದ ಡಿಸಿಗಳಿಗೆ ಮನವಿ ಸಲ್ಲಿಸಲಾಯಿತು.
ದಸರಾ ಹಬ್ಬದ ಆಚರಣೆಗೆ ಅವಕಾಶ ನೀಡುವಂತೆ ಮನವಿ
ಈ ವೇಳೆ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಶಾಸಕರು, ಅನೇಕ ವರ್ಷಗಳಿಂದ ದಸರಾ ಹಬ್ಬವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದ್ದರಿಂದ ಕೊರೊನಾ ಮಹಾಮಾರಿಯಿಂದ ಈ ವರ್ಷ ಅತೀ ಸರಳ ರೀತಿಯಿಂದ ಆಚರೆಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ಸರ್ಕಾರದ ಕೋವಿಡ್ (19) ನಿಯಮಗಳನ್ನು ಪಾಲನೆ ಮಾಡಲಾಗುವುದು. ಹೀಗಾಗಿ ಬೆಳಗಾವಿ ದಸರಾ ಹಬ್ಬವನ್ನು ಆಚರಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.