ಬೆಳಗಾವಿ: ಬೆಂಗಳೂರು ಗಲಭೆ ಪ್ರಕರಣದಲ್ಲಿ ಸಮಾಜಘಾತುಕ ಶಕ್ತಿಗಳ ಕೈವಾಡವಿದ್ದು, ಸಮಾಜಕ್ಕೆ ಕಂಟಕ ತರುವ ಶಕ್ತಿಗಳನ್ನು ಸದೆಬಡಿಯಲು ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಹಮಾರಾ ದೇಶ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಗಲಭೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - Hamara desh Organization
ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ನಾಗರಿಕ ಸಮಾಜದ ನೆಮ್ಮದಿಯನ್ನು ಕಸಿದುಕೊಂಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಉದ್ದೇಶಪೂರ್ವಕವಾಗಿಯೇ ಈ ಕೃತ್ಯವನ್ನು ಎಸಗಿದ್ದಾರೆಂದು ಹಮಾರಾ ದೇಶ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ನಾಗರಿಕ ಸಮಾಜದ ನೆಮ್ಮದಿಯನ್ನು ಕಸಿದುಕೊಂಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಉದ್ದೇಶಪೂರ್ವಕವಾಗಿಯೇ ಈ ಕೃತ್ಯವನ್ನು ಎಸಗಿದ್ದಾರೆಂದು ಆರೋಪಿಸಿದರು.
ಗಲಭೆ ಸೃಷ್ಟಿಸಿದ ಆರೋಪಿಗಳ ವಿರುದ್ಧ ಸರ್ಕಾರ ದಿಟ್ಟ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು. ದುಷ್ಟ ಶಕ್ತಿಗಳನ್ನು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಸದೆಬಡಿಯಬೇಕು. ನಾಗರಿಕರ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.