ಚಿಕ್ಕೋಡಿ(ಬೆಳಗಾವಿ):ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿರುವ ನಿಪ್ಪಾಣಿ - ಮುಧೋಳ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಕಟ್ಟಿಗೆ ಇಟ್ಟು, ಹೋಳಿ ಆಡುವ ನೆಪದಲ್ಲಿ ಕೆಲವರು ಹಣ ವಸೂಲಿ ದಂಧೆಗೆ ಇಳಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹೆದ್ದಾರಿ ಮೇಲೆ ಕಟ್ಟಿಗೆ ಇಟ್ಟು ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಯಾರು ಹಣ ಕೊಡುವುದಿಲ್ಲವೋ ಅಂತಹ ಸವಾರರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ. ಹಣ ಕೊಟ್ಟರೆ ಮಾತ್ರ ಮುಂದೆ ಸಾಗಲು ಬಿಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.