ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ.. ಕಾರಿನ ಮೇಲೆ ಕಲ್ಲು ಎಸೆತ: ಸಿಸಿಟಿವಿಯಲ್ಲಿ ಕೃತ್ಯ ಸೆರೆ - ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ

ಬೆಳಗಾವಿಯ ಎಸ್‌ಪಿಎಂ ರಸ್ತೆಯ ಅಪಾರ್ಟ್‌ಮೆಂಟ್ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಬೆಳಗಿನ ಜಾವ 4:30ರ ಸುಮಾರಿಗೆ ಬಂದ ಮುಸುಕುಧಾರಿಯೊಬ್ಬ ಕಲ್ಲೆಸೆದಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

saboteur throwing stone on car at Belagavi
ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ಎಸೆೆದ ದುಷ್ಕರ್ಮಿ: ಸಿಸಿಟಿವಿ ದೃಶ್ಯ

By

Published : Jan 4, 2022, 10:40 AM IST

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ‌. ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ಎಸೆದು ದುಷ್ಕರ್ಮಿ ಪರಾರಿಯಾಗಿದ್ದಾನೆ.

ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ಎಸೆೆದ ದುಷ್ಕರ್ಮಿ: ಸಿಸಿಟಿವಿ ದೃಶ್ಯ

ಬೆಳಗಾವಿಯ ಎಸ್‌ಪಿಎಂ ರಸ್ತೆಯಲ್ಲಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಬೆಳಗಿನ ಜಾವ 4:30ರ ಸುಮಾರಿಗೆ ಬಂದ ಮುಸುಕುಧಾರಿಯೊಬ್ಬ ಕಲ್ಲೆಸೆದಿದ್ದಾನೆ. ಬಳಿಕ ಕಾರಿನ ಗಾಜುಗಳನ್ನು ಒಡೆದು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಉದ್ಯಮಿ ನಿತಿನ್ ಮಹಾಡಗೂತ್ ಎಂಬುವರಿಗೆ ಸೇರಿದ ಕಾರು ಜಖಂಗೊಂಡಿದೆ. ಮುಸಕುಧಾರಿ ವ್ಯಕ್ತಿ ಕಾರಿನ ಮೇಲೆ ಕಲ್ಲೆಸೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಸಮೇತ ಉದ್ಯಮಿ ನಿತಿನ್ ಮಹಾಡಗೂತ್ ಖಡೇಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಜನಸಂದಣಿ ಮೇಲೆ ಹರಿದ ಕಾರು: 14 ಮಂದಿ ಸಾವು

ABOUT THE AUTHOR

...view details