ಚಿಕ್ಕೋಡಿ: ಕೆ.ಎಲ್.ಇ ಸಂಸ್ಥೆಯ ಜಿ.ಆಯ್. ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಂಗೀತಾ ಮೋರೆ 2018-19ನೇ ಪದವಿ ಪರೀಕ್ಷೆಯಲ್ಲಿ ಪ್ರತಿಶತ ಶೇ.96.87 ಅಂಕಗಳನ್ನು ಗಳಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾಳೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ನಿಪ್ಪಾಣಿ ವಿದ್ಯಾರ್ಥಿನಿ
ಜಿ.ಆಯ್.ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಂಗೀತಾ ಮೋರೆ 2018-19ನೇ ಪದವಿ ಪರೀಕ್ಷೆಯಲ್ಲಿ ಪ್ರತಿಶತ ಶೇ.96.87 ಅಂಕಗಳನ್ನು ಗಳಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಸಂಗೀತಾ ಮೋರೆ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು, ಒಟ್ಟು 10 ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದು, ಗಣಿತದಲ್ಲಿ 7, ರಸಾಯನ ಶಾಸ್ತ್ರದಲ್ಲಿ 2 ಮತ್ತು ಭೌತಶಾಸ್ತ್ರ ವಿಷಯದಲ್ಲಿ ಒಂದು ಬಾರಿ 100 ಅಂಕ ಪಡೆಯುವ ಮೂಲಕ ಗಡಿ ಭಾಗದ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ.