ಬೆಳಗಾವಿ: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಸಚಿವ ಕೆ.ಎಸ್. ಈಶ್ವರಪ್ಪ ಅರೆಸ್ಟ್ ಆಗೋವರೆಗೂ ಅಂತ್ಯಕ್ರಿಯೆ ನಡೆಸೋದಿಲ್ಲ ಎಂದು ಮೃತರ ಸಹೋದರ ಪ್ರಶಾಂತ ಪಾಟೀಲ ತಿಳಿಸಿದ್ದಾರೆ.
ಸಹೋದರ ಸಂತೋಷ್ನ ಸಾವಿಗೆ ಸಚಿವ ಕೆ ಎಸ್ ಈಶ್ವರಪ್ಪ ನೇರ ಕಾರಣ. ಶೇ.40ರಷ್ಟು ಕಮೀಷನ್ ಕೇಳಿದ್ದರು. ಮಾನನಷ್ಟ ಮೊಕದ್ದಮೆ ಹಾಕಿದ್ದರು. ಜೀವ ಬೇದರಿಕೆ ಕೂಡ ಹಾಕಿದ್ದರು ಎಂದು ಸೋದರ ಪ್ರಶಾಂತ್ ಪಾಟೀಲ ಆರೋಪಿಸಿದ್ದಾರೆ. ಹೀಗಾಗಿ, ಅವರನ್ನು ಬಂಧಿಸಬೇಕು, ತಮ್ಮನ ಸಾವಿಗೆ ನ್ಯಾಯ ಸಿಗಲೇಬೇಕೆಂದು ಒತ್ತಾಯಿಸಿದ್ದಾರೆ.