ಬೆಂಗಳೂರು:ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ (Belagavi Session) ಡಿಸೆಂಬರ್ 13 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ (Belagavi Suvarna Soudha) ನಡೆಸಲು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಅಧಿವೇಶನ ನಡೆಸಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಅಧಿವೇಶನದ ವೇಳಾಪಟ್ಟಿಯನ್ನು ಸರ್ಕಾರ ಶೀಘ್ರದಲ್ಲೇ ಪ್ರಕಟಿಸಲಿದೆ.
ಮೂರು ವರ್ಷದ ನಂತರ ಬೆಳಗಾವಿಯಲ್ಲಿ ಅಧಿವೇಶನ, ಡಿ.13ರಿಂದ ಶುರು - ಬೆಳಗಾವಿ ಅಧೀವೇಶನಕ್ಕೆ ರಾಜ್ಯಪಾಲರ ಅನುಮೋದನೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ಅಧಿವೇಶನ (Belagavi Session) ನಡೆಯಲಿದೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯಲಿರುವ ಮೊದಲ ಅಧಿವೇಶನ ಇದಾಗಿದೆ. ಬೆಳಗಾವಿಯಲ್ಲಿ 2006 ರಿಂದ ವರ್ಷಕ್ಕೊಮ್ಮೆ ವಿಧಾನಮಂಡಲ ಅಧಿವೇಶನವನ್ನು ಸರ್ಕಾರ ನಡೆಸುತ್ತಾ ಬಂದಿತ್ತು. ಆದರೆ, ಪ್ರವಾಹ ಮತ್ತು ಕೋವಿಡ್ನಿಂದಾಗಿ ಕಳೆದ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗಿಲ್ಲ. ಬದಲಿಗೆ ಬೆಂಗಳೂರಿನಲ್ಲಿ ಅಧಿವೇಶನವನ್ನು ನಡೆಸಲಾಗಿತ್ತು. ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ನಾಯಕರಿಂದ ಒತ್ತಾಯ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ನಿರ್ಧರಿಸಿತು. ನ.25 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಎಷ್ಟು ದಿನಗಳ ಕಾಲ ಅಧಿವೇಶನ ನಡೆಸಬೇಕೆಂಬುದರ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.