ಚಿಕ್ಕೋಡಿ:ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜೈಲಿನಿಂದ ಹೊರಬಂದ ಬಳಿಕ ಗಡ್ಡ ಬಿಟ್ಟು ಪ್ರವಾಸ ಕೈಗೊಂಡಿದ್ದಾರೆ. ಅದೇನೋ ಯುದ್ಧ ಗೆದ್ದಂತೆ ಹೊರಟಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಡಿಕೆಶಿ ಗಡ್ಡದ ಬಗ್ಗೆ ಶೆಟ್ಟರ್ ಹೇಳಿದ್ದೇನು? - ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜೈಲಿನಿಂದ ಹೊರಬಂದ ಬಳಿಕ ಗಡ್ಡ ಬಿಟ್ಟು ಪ್ರವಾಸ ಕೈಗೊಂಡಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಗಡ್ಡ ನೋಡಿ ನನಗೆ ವಿಚಿತ್ರ ಅನಿಸುತ್ತಿದೆ ಎಂದು ನಕ್ಕ ಶೆಟ್ಟರ್, ಬರೀ ಜಾಮೀನು ಸಿಕ್ಕಿದ್ದಕ್ಕೆ ವಿಜಯೋತ್ಸವ ಮಾಡುತ್ತಿದ್ದಾರೆ. ಇನ್ನೂ ಯಾವುದೇ ಪ್ರಕರಣ ಖುಲಾಸೆ ಆಗಿಲ್ಲ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಮೊನ್ನೆ ಹುಬ್ಬಳ್ಳಿಗೆ ಬಂದಾಗ ವಿಜಯೋತ್ಸವ ಮಾಡಿದ್ದಾರೆ. ಯಾವ ಲೋಕದಲ್ಲಿ ಇದ್ದಾರೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವುದೇ ಅಲ್ಲೋಲ ಕಲ್ಲೋಲ ಆಗಲ್ಲ. ಈ ಚುನಾವಣೆ ನಂತರ ಬಿಜೆಪಿ ಇನ್ನೂ ಗಟ್ಟಿಮುಟ್ಟಾಗುತ್ತದೆ. ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಬಿಜೆಪಿ ಅಧಿಕಾರದಿಂದ ಕೆಳಗಿಯುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.