ಬೆಳಗಾವಿ:ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ - ಪೊಲೀಸರ ಮೇಲೆ ಕಲ್ಲು ತೂರಾಟ
ಶಿವಾಜಿ ಮಹಾರಾಜರ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ನೂರಾರು ಪ್ರತಿಭಟನಾಕಾರರು ಜಮಾವಣೆಗೊಂಡು, ಪ್ರತಿಭಟನೆ ನಡೆಸುತ್ತಿದ್ದು, ತಪ್ಪಿತಸ್ಥರನ್ನ ಬಂಧನ ಮಾಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಶುಭಂ ಶಳಕೆ, ಮಾಜಿ ಮೇಯರ್ ಸರಿತಾ ಪಾಟೀಲ ಸೇರಿ ಎಂಇಎಸ್ ಪುಂಡರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ನೀಡಿಲ್ಲ ಎಂಬ ಮಾತು ಸಹ ಕೇಳಿ ಬಂದಿದ್ದು, ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಎಂಇಎಸ್ ಪುಂಡರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಡಿಸಿಪಿ ವಿಕ್ರಂ ಆಮಟೆ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪೊಲೀಸ್ ವಾಹನದ ಮೇಲೂ ಕಲ್ಲೂ ತೂರಿ ಪುಂಡಾಟ ಪ್ರದರ್ಶನ ಮಾಡಿದ್ದಾರೆ ಎಂದು ವರದಿಯಾಗಿದೆ.