ಬೆಳಗಾವಿ: ಸ್ಪೀಕರ್ ಕಾಗೇರಿ ಹಾಗೂ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶವನ್ನ ಕನಿಷ್ಠ ಒಂದು ವಾರ ಮುಂದುವರಿಸಲು ಒತ್ತಾಯಿಸಿದ್ದಾರೆ.
ಪತ್ರದಲ್ಲಿ ಅವರು, 3 ವರ್ಷಗಳ ಬಳಿಕ ಬೆಳಗಾವಿಯಲ್ಲಿ 10 ದಿನಗಳ ಕಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕದ ನೀರಾವರಿ ವಿಷಯಗಳು ಚರ್ಚೆಯಾಗಬೇಕು.
ಕೃಷಿ ಬಿಕ್ಕಟ್ಟುಗಳು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆಗಳು, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮಾನತೆ ವಿಷಯಗಳನ್ನು ಪ್ರಧಾನವಾಗಿ ಚರ್ಚಿಸಬೇಕಾಗಿದೆ. ಆದರೆ, ಅಧಿವೇಶನ ನಡೆಯುವ ಸಂದರ್ಭದಲ್ಲೇ ದುರುದ್ದೇಶಪೂರ್ವಕವಾಗಿ ಕೆಲವು ದುಷ್ಟ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗೆ ಹಾನಿ ಮಾಡಿವೆ ಎಂದಿದ್ದಾರೆ.