ಕರ್ನಾಟಕ

karnataka

ETV Bharat / city

ನಂದಗಡಕ್ಕೆ ಸಿದ್ದರಾಮಯ್ಯ ಭೇಟಿ: ರಾಯಣ್ಣನ ಸಮಾಧಿಗೆ ನಮಿಸಿದ ಮಾಜಿ ಸಿಎಂ

ಬೆಳಗಾವಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಮ್ಮ ಆಡಳಿತದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ರಾಯಣ್ಣ ಸಮಾಧಿ ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.

siddaramaiah-visited-the-nandagada
ಮಾಜಿ ಸಿಎಂ ಸಿದ್ದರಾಮಯ್ಯ

By

Published : Jul 27, 2021, 3:25 PM IST

ಬೆಳಗಾವಿ:ಜಿಲ್ಲೆಯಖಾನಾಪುರ ತಾಲೂಕಿನ ಪ್ರವಾಸದಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಸ್ವಾಗತಕ್ಕೆ ಜನರು ಕಿಕ್ಕಿರಿದು ಸೇರಿದ್ದರು. ಸಾಮಾಜಿಕ ಅಂತರ ಮರೆತು ಬೃಹತ್ ಹಾರ ಹಾಕಿ ಸ್ವಾಗತಿಸಿದರು. ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು.

ರಾಯಣ್ಣನ ಸಮಾಧಿಗೆ ನಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ತಾವು ಸಿಎಂ ಆಗಿದ್ದಾಗ ಸಂಗೊಳ್ಳಿ ಗ್ರಾಮದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಹಾಗೂ ರಾಯಣ್ಣ ಸಮಾಧಿ ಸ್ಥಳದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ನಂತರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳಕ್ಕೆ ಭೇಟಿ ನೀಡಿದರು.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಶಾಸಕಿಯರಾದ ಅಂಜಲಿ ನಿಂಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದರು.

ABOUT THE AUTHOR

...view details