ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೀರಣ್ಯಕೇಶಿ ನದಿ ಪ್ರವಾಹ ಪೀಡಿತ ಪ್ರದೇಶ ಚಿಕಾಲಗುಡ್ಡ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಂಕಷ್ಟಕ್ಕೊಳಗಾದವರಿಂದ ಮಾಹಿತಿ ಪಡೆದರು.
ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಹವಾಲು ಆಲಿಸಿದ ಸಿದ್ದರಾಮಯ್ಯ - siddaramaiah visits chikalagudda village
ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೀರಣ್ಯಕೇಶಿ ನದಿ ಪ್ರವಾಹಪೀಡಿತ ಪ್ರದೇಶ ಚಿಕಾಲಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನದಿಗಳು ತುಂಬಿ ಹರಿಯುತ್ತಿವೆ. ಗಡಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಈ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.
ರಸ್ತೆಯಲ್ಲಿ ಅಪಘಾತ:ಸಿದ್ದರಾಮಯ್ಯ ಆಗಮಿಸುತ್ತಿದ್ದ ರಸ್ತೆಯಲ್ಲೇ ಲಾರಿಯೊಂದು ಪಲ್ಟಿಯಾಗಿತ್ತು. ಚಿಕಾಲಗುಡ್ಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ಮಾಜಿ ಸಿಎಂ ವಾಹನ ಆಗಮಿಸುವ ಕೆಲ ನಿಮಿಷದ ಮೊದಲು ಈ ಅಪಘಾತ ಜರುಗಿದೆ.