ಕರ್ನಾಟಕ

karnataka

ETV Bharat / city

ಡ್ರಗ್ಸ್ ದಂಧೆ ವಿರೋಧಿಸಿ ಎಬಿವಿಪಿ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಡ್ರಗ್ಸ್ ದಂಧೆಯಲ್ಲಿ ಭಾಗಿರುವವರನ್ನು ಬಂಧಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

Signature Collection Campaign by ABVP opposing Drugs Mafia
ಡ್ರಗ್ಸ್ ದಂಧೆ ವಿರೋಧಿಸಿ ಎಬಿವಿಪಿ ವತಿಯಿಂದ ಸಹಿ ಸಂಗ್ರಹ ಅಭಿಯಾನ

By

Published : Sep 9, 2020, 6:35 PM IST

ಬೆಳಗಾವಿ:ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿರುವ ಡ್ರಗ್ಸ್​ ದಂಧೆಯಲ್ಲಿ ತೊಡಗಿರುವವನ್ನು ತಕ್ಷಣವೇ ಬಂಧಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

ಡ್ರಗ್ಸ್ ದಂಧೆ ವಿರೋಧಿಸಿ ಎಬಿವಿಪಿ ವತಿಯಿಂದ ಸಹಿ ಸಂಗ್ರಹ ಅಭಿಯಾನ

ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಭಿಯಾನಕ್ಕೆ ಸಹಿ ಹಾಕುವ ಮೂಲಕ ಡ್ರಗ್ಸ್​​ ಮುಕ್ತ ಭಾರತ ನಿರ್ಮಾಣದ ಸಂಕಲ್ಪ ತೊಟ್ಟರು. ಈ ವೇಳೆ ಮಾತನಾಡಿದ ಎಬಿವಿಪಿ ಕಾರ್ಯಕರ್ತ ಪೃಥ್ವಿಕುಮಾರ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಡ್ರಗ್ಸ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಹಿ ಸಂಗ್ರಹ ಎಂಬ ವಿನೂತನ ಅಭಿಯಾನ ಹಮ್ಮಿಕೊಂಡಿದೆ.

ರಾಜ್ಯದ ಹಲವಾರು ಕಾಲೇಜುಗಳ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್​ ಪೂರೈಸಲಾಗುತ್ತಿದೆ. ಸಿನಿಮಾ ನಟರು, ರಾಜಕಾರಣಿಗಳ ಮಕ್ಕಳು ಈ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಈ ದಂಧೆಯಲ್ಲಿ ಭಾಗಿಯಾದವರ ವಿರುದ್ದ ಕೇಂದ್ರ ಸರ್ಕಾರ ದೇಶದ್ರೋಹದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details