ಕರ್ನಾಟಕ

karnataka

ETV Bharat / city

ಬೆಳಗಾವಿ: ರಜೆ ಮೇಲೆ ಊರಿಗೆ ಬಂದಿದ್ದ ಯೋಧ.. ರಸ್ತೆ ಅಪಘಾತದಲ್ಲಿ ಸಾವು - ಅಪಘಾತದಲ್ಲಿ ಯೋಧ ನಿಧನ

ರಜೆ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಯೋಧ ಸಾವು
ಯೋಧ ಸಾವು

By

Published : Jul 12, 2022, 3:43 PM IST

ಬೆಳಗಾವಿ: ತಾಲೂಕಿನ ರಕ್ಕಸಕೊಪ್ಪ- ಬೆಳಗಾವಿ ರಸ್ತೆಯಲ್ಲಿ ಮಂಗಳವಾರ ನಸುಕಿನಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಯೋಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗುಂದಿ ನಿವಾಸಿ ಓಂಕಾರ ಮಹಾದೇವ ಹಿಂಡಲಗೇಕರ್ (23) ಮೃತ ಯೋಧ. ಎರಡು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರಿದ ಇವರು ಹತ್ತು ದಿನಗಳ ಹಿಂದಷ್ಟೇ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದರು.

ಸೋಮವಾರ ರಾತ್ರಿ ಊರಿನಿಂದ ಹೊರ ಹೋಗಿದ್ದ ಓಂಕಾರ, ತಡರಾತ್ರಿ ಮರಳಿ ತಮ್ಮೂರಿಗೆ ಹೊರಟಿದ್ದರು. ಅತಿ ವೇಗವಾಗಿ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾಗಿ ಬಿದ್ದಿತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಾದೆ.

ತೀವ್ರ ರಕ್ತಸ್ರಾವದಿಂದ ಯೋಧ ಸ್ಥಳದಲ್ಲೇ ಕೊನೆಯಿಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ‌ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

(ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ.. ಹಳ್ಳದಲ್ಲಿ ಕಾರು ಪಲ್ಟಿಯಾಗಿ ನಾಪತ್ತೆಯಾಗಿದ್ದ ಇಬ್ಬರ ಮೃತದೇಹ ಪತ್ತೆ)

ABOUT THE AUTHOR

...view details