ಬೆಳಗಾವಿ: ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಯಾವ ದೇಶದ ಪರವಾಗಿದ್ದಾರೆ ಎಂಬುವುದನ್ನು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಆಗ್ರಹಿಸಿದ್ದಾರೆ.
ಪಾದರಾಯನಪುರ ಘಟನೆ ಬಗ್ಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರತಿಕ್ರಿಯೆ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೊರೊನಾ ವೈರಸ್ ಯಾವುದೇ ಜಾತಿ, ಭಾಷೆ, ಧರ್ಮಕ್ಕೆ ಸೀಮಿತವಾಗಿಲ್ಲ. ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ದುಷ್ಕರ್ಮಿಗಳ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಹಾಗೂ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಪ್ರಚೋದನೆ ಕೊಡುವರನ್ನು ಗುರುತಿಸಿ, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೊದಲು ಜಮೀರ್ ಅಹ್ಮದ್ ಭಾರತದ ಪರವಾಗಿದ್ದಾರಾ? ಅಥವಾ ಇನ್ಯಾವುದೋ ದೇಶದ ಪರವಾಗಿದ್ದಾರಾ ಎಂಬುವುದನ್ನುಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯ ಮತ್ತು ದೇಶದ ಬಗ್ಗೆ ಗೌರವ ಇಲ್ಲವಾದ್ರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲದೆ ಯಾವ ದೇಶದ ಪರವಾಗಿ ಇದ್ದಾರೆ ಎಂಬುದು ಸ್ಪಷ್ಟಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಬ್ಬ ಶಾಸಕ ನಾನು ಬೇರೆದ್ದನ್ನೇ ಮಾಡುತ್ತೇನೆ ಅಂದರೆ ಅವನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ರಾಜಕೀಯ ಬೇಡ, ಜನರ ಆರೋಗ್ಯ ಮುಖ್ಯ. ಜಮೀರ್ ಅಹಮ್ಮದ್ ಸ್ಪಷ್ಟವಾಗಿ ತಮ್ಮ ನಿಲುವನ್ನ ಹೇಳಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಕಠಿಣವಾದ ಕಾನೂನಿನ ಕ್ರಮ ಎದುರಿಸಬೇಕು. ರಾಜಕೀಯ ಅಥವಾ ತಮ್ಮ ಬೆಳೆ ಬೆಯಿಸಿಕೊಳ್ಳುವ ಸಂದರ್ಭದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದಿದ್ದಾರೆ.