ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ, ನಗರದ ಫುಲ್‍ಬಾಗ್ ಗಲ್ಲಿಯಲ್ಲಿ ನಡೆದಿದೆ.
ಇಲ್ಲಿನ ಭಾಗೀರಥಿ ಕಿರಣ ಪಾಟೀಲ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ. ಈ ವೇಳೆ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು.