ಬೆಳಗಾವಿ: ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ನೆರೆ ಸಂತ್ರಸ್ತರ ಕಷ್ಟ ನೋಡಿ ಅವರಿಗೆ ಸಾಂತ್ವನ ಹೇಳಲು ಬಂದಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ನೆರೆ ಸಂತ್ರಸ್ತರ ಕಷ್ಟ ನೋಡಿ ಜ್ವರದ ಮಧ್ಯೆಯೂ ಬಂದಿರುವೆ: ಹೆಚ್ಡಿಕೆ
ನೆರೆ ಸಂತ್ರಸ್ತರನ್ನು ನೋಡಲು ಜ್ವರದ ಮಧ್ಯೆಯೂ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಳಗಾವಿಯಲ್ಲಿ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಬೆಳಗಾವಿ, ಚಿಕ್ಕೋಡಿ, ಗದಗ, ಧಾರವಾಡದ ನೆರೆ ಪ್ರದೇಶಗಳಿಗೆ ಹೋಗುತ್ತಿದ್ದೇನೆ. ನೆರೆ ಸಂತ್ರಸ್ತರಿಗಾಗಿ ಮಧುರೈನಿಂದ 10 ಸಾವಿರ ರಗ್, ಬೆಡ್ಶೀಟ್ಗಳನ್ನು ತರಿಸಿ ನೀಡುತ್ತೇನೆ. ನೆರೆ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಅವಶ್ಯಕತೆ ಇದ್ರೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು.
ಸರ್ಕಾರ ಈಗಾಗಲೇ ಸಂತ್ರಸ್ತರಿಗಾಗಿ ಕೆಲಸ ಮಾಡುತ್ತಿದೆ. ಇದರಲ್ಲಿ ನಾನು ರಾಜಕೀಯ ಬೆರಸಲ್ಲ. ಬೆಳೆ ಹಾನಿ ಸೇರಿದಂತೆ ಜೀವಹಾನಿಯೂ ದೊಡ್ಡ ಮಟ್ಟದಲ್ಲಿ ಆಗುತ್ತಿದೆ. ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೇ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು ಎಂದರು.