ಕರ್ನಾಟಕ

karnataka

ETV Bharat / city

ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ  ಉಪವಾಸ ಸತ್ಯಾಗ್ರಹ : ಇನ್ನು ಸ್ಥಳಕ್ಕೆ ಬಾರದ ಡಿಸಿ ವಿರುದ್ಧ ಆಕ್ರೋಶ - ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ಇನ್ನು ಅಥಣಿಗೆ ಬಾರದ ಡಿಸಿ: ಪ್ರತಿಭಟನಕಾರರ ಆಕ್ರೋಶ

By

Published : Nov 2, 2019, 9:15 PM IST

ಅಥಣಿ: ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಧಿಕಾರಿಯವರು ಪ್ರತಿಭಟನಾಕಾರರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರ ಅಹವಾಲು ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದು, ಇನ್ನೂ ಬಂದಿಲ್ಲ. ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ವಿರುದ್ಧ ಮಹಿಳೆಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ಜತೆಗೆ ಚಿಕ್ಕ ಚಿಕ್ಕ ಮಕ್ಕಳು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಮಾನ್ಯ ಜಿಲ್ಲಾಧಿಕಾರಿಗಳೆ ಬನ್ನಿ... ಡಿಸಿಎಂ ಲಕ್ಷ್ಮಣ್ ಸವದಿ ಮನೆ ಬಿಟ್ಟು ಹೊರಗೆ ಬನ್ನಿ... ಅಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For All Latest Updates

ABOUT THE AUTHOR

...view details