ಚಿಕ್ಕೋಡಿ: ಪ್ರತಿಯೊಂದು ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸಂಬಂಧಿಸಿದ ಮಾಹಿತಿ ಹಾಗೂ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ನೀಡಲು ರಾಜ್ಯ ಸರ್ಕಾರ ಬದ್ಧ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ರಾಷ್ಟ್ರೀಯ ಪೋಷಣ್ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಮೊದಲಿದ್ದ ಆಹಾರ ಪದ್ಧತಿ ಈಗ ಸಂಪೂರ್ಣ ಬದಲಾಗಿದೆ. ಆದರೆ, ಅದು ಹೆಚ್ಚು ಪೌಷ್ಟಿಕಾಂಶದಿಂದ ಕೂಡಿತ್ತು. ಅದರಂತೆ ಈಗ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಹೆಣ್ಣು ಮಗು ಹುಟ್ಟಿದ್ದರೆ ಮಹಾಲಕ್ಷ್ಮಿ ಬಾಂಡ್ ವಿತರಿಸಲಾಗುತ್ತದೆ ಎಂದರು.
ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಇಲಾಖೆಯಿಂದ ಮುಂದಿನ ಮೂರು ವರ್ಷಗಳಲ್ಲಿ ಉತ್ತಮವಾದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಅದರಂತೆ ಕರ್ನಾಟಕಕ್ಕೆ ನಂಬರ್ 1 ಇಲಾಖೆಯಾಗಿ ಪರಿವರ್ತಿಸಲು ಎಲ್ಲರೂ ಕೈಜೋಡಿಸಬೇಕು. ಮಹಿಳೆಯರಿಗಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಸರ್ಕಾರ ಸಹಾಯಹಸ್ತ ನೀಡುತ್ತಿದೆ. ಅದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.