ಬೆಳಗಾವಿ: ದೆಹಲಿಯ ನಿಜಾಮುದ್ಧೀನ್ ಧರ್ಮಸಭೆಯಲ್ಲಿ ಭಾಗವಹಿಸಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮಸ್ಥರು 10 ಮಂದಿಯನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ದೆಹಲಿಯಿಂದ ಮರಳಿದ ಹತ್ತು ಮಂದಿ ಆಸ್ಪತ್ರೆಗೆ ಕಳುಹಿಸಿದ ಗ್ರಾಮಸ್ಥರು - The Nizamuddin Dharma Sabha of Delhi
ನಿಜಾಮುದ್ಧೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 10 ಮಂದಿಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಬರುವಂತೆ ಗ್ರಾಮಸ್ಥರೇ ಒತ್ತಾಯಿಸಿ ಕಳುಹಿಸಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ನಡೆದಿದೆ.
ದೆಹಲಿಯಿಂದ ಮರಳಿದ ಹತ್ತು ಮಂದಿಯನ್ನು ಆಸ್ಪತ್ರೆಗೆ ಕಳುಹಿಸಿದ ಗ್ರಾಮಸ್ಥರು
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮುರಗೋಡ ಗ್ರಾಮಸ್ಥರು ಮುಂಜಾಗ್ರತೆ ವಹಿಸಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಬರುವಂತೆ ಅವರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಸ್ಥರ ಮಾತಿಗೆ ಸ್ಪಂದಿಸಿದ ಅವರು ತಪಾಸಣೆಗಾಗಿ ಖಾಸಗಿ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ.