ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕಿನ ಮುರಗೋಡ ಶಾಖೆಗೆ ಕನ್ನ ಹಾಕಿರುವ ಕಳ್ಳರು ನಗದು, ಚಿನ್ನ ಸೇರಿ 6 ಕೋಟಿ ಮೌಲ್ಯದ ವಸ್ತುಗಳನ್ನು ಎಗರಿಸಿ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ರಾತ್ರಿ ಬೀಗ ಮುರಿದು ಕಳ್ಳರು ಈ ಕೃತ್ಯ ಎಸಗಿದ್ದಾರೆ.
4 ಕೋಟಿ 41 ಲಕ್ಷ ರೂಪಾಯಿ ನಗದು, 1.5 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿವೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಹಾಗೂ ಮುರಗೋಡ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ₹25 ಲಕ್ಷದ ಚೆಕ್ ಹಸ್ತಾಂತರಿಸಿದ ಬಿಎಸ್ವೈ
ರಾಜ್ಯದ ಜಿಲ್ಲಾ ಸಹಕಾರ ಬ್ಯಾಂಕ್ಗಳ ಪೈಕಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅತಿ ಹೆಚ್ಚು ಲಾಭದಲ್ಲಿದೆ. ನೂರು ವರ್ಷ ಪೂರೈಸಿರುವ ಈ ಬ್ಯಾಂಕ್ ಜಿಲ್ಲೆಯಲ್ಲಿ 100 ಶಾಖೆಗಳಿವೆ. ರೈತರ ಪಾಲಿನ ಆಶಾಕಿರಣವಾಗಿರುವ ಈ ಬ್ಯಾಂಕ್ ಠೇವಣಿ ಸಂಗ್ರಹ ಹಾಗೂ ಚಿನ್ನದ ಮೇಲೂ ಸಾಲ ನೀಡುತ್ತಿದೆ. ಠೇವಣಿ ಇಟ್ಟಿದ್ದ 4 ಕೋಟಿ 41 ಲಕ್ಷ ರೂಪಾಯಿ ನಗದು, ಅಡವಿಟ್ಟಿದ್ದ 1.5 ಕೋಟಿ ಮೌಲ್ಯದ ಚಿನ್ನಾಭರಣಗಳೀಗ ಕಳ್ಳತನವಾಗಿದೆ.