ಬೆಳಗಾವಿ:ಬಿಟ್ ಕಾಯಿನ್ ವಿಚಾರದಲ್ಲಿ ಯಾವುದೇ ಅಡ್ಜೆಸ್ಟ್‌ಮೆಂಟ್ ಇಲ್ಲ. ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲವೆಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.
Priyank Kharge on Bitcoin case: ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸತ್ಯಾಂಶ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನ ಮಾಡುತ್ತಿದೆ. ನಾವು ಮೊದಲಿನಿಂದಲೂ ತನಿಖೆ ಆಗಬೇಕು ಎನ್ನುತ್ತಿದ್ದೇವೆ. ಹೊಂದಾಣಿಕೆ ರಾಜಕಾರಣವನ್ನು ಕಾಂಗ್ರೆಸ್ ಮಾಡಲ್ಲ. ಮುಂದಿನ ವಾರ ಬಿಟ್ ಕಾಯಿನ್ ವಿಚಾರ ಚರ್ಚೆಗೆ ಬರುತ್ತದೆ ಎಂದು ತಿಳಿಸಿದರು.
ಗುತ್ತಿಗೆದಾರ ಸಂಘದ ಟೆಂಡರ್ ಕಮಿಷನ್ ಪತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಿಜಿಸ್ಟರ್ ಬಾಡಿ ಪ್ರಧಾನಿ ಮೋದಿಗೆ ಶೇ.40ರಷ್ಟು ಕಮಿಷನ್ ಬಗ್ಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ. ಅದಕ್ಕಿಂತ ಸಾಕ್ಷಿ ಏನು ಬೇಕು? ಎಂದು ಪ್ರಶ್ನಿಸಿದರು.
ಬಿಟ್ ಕಾಯಿನ್ ವಿಷಯ ಮುಂದಿನವಾರ ಸದನದಲ್ಲಿ ಚರ್ಚೆಗೆ ಬರುತ್ತದೆ. ಸಿಎಲ್‌ಪಿ ನಾಯಕರಾದ ಸಿದ್ದರಾಮಯ್ಯ ವಿಷಯ ಚರ್ಚೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ ವಿಚಾರ ಕ್ಯಾಬಿನೆಟ್ನಲ್ಲಿ ಚರ್ಚೆ : ಸಚಿವ ಮಾಧುಸ್ವಾಮಿ