ಬೆಳಗಾವಿ: ರಾಜ್ಯದಲ್ಲಿಯೇ ಮೊದಲ ಬಾರಿ ಆಶಾ ಕಾರ್ಯಕರ್ತೆಯರಿಗೆ ಥರ್ಮಲ್ ಸ್ಕ್ರೀನಿಂಗ್ ಮೀಟರ್ ವಿತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಗರಸಭೆ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಐ.ಎಮ್.ಎ ರೋಟರಿಕ್ಲಬ್ ಹಾಗೂ ಇನ್ನಿತರ ಸಂಘಸಂಸ್ಥೆಗಳ ಮೂಲಕ ಸುಮಾರು 41 ಥರ್ಮಲ್ ಸ್ಕ್ರೀನಿಂಗ್ ಮೀಟರ್ ಗಳನ್ನು ಆಶಾಕಾರ್ಯಕರ್ತೆಯರಿಗೆ ನೀಡಿದರು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲ ಬಡ ಕುಟುಂಬಗಳಿಗೆ ತೊಂದರೆಯಾಗಿದೆ. ಆದರೆ, ಈಗ ಅದು ಅನಿವಾರ್ಯವಾಗಿದ್ದು ವೈದ್ಯರು, ಆಶಾ ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಪೌರಾಯುಕ್ತ ಮಹಾವೀರ ಬೋರಣ್ಣವರ, ವೈದ್ಯಾಧಿಕಾರಿ ಸೀಮಾ ಗೊಂಜಾಳ, ನಗರಸಭೆಯ ಸದಸ್ಯರು ಗಳು, ರೋಟರಿ ಕ್ಲಬ್ ನ ಸದಸ್ಯರು, ಉಪಸ್ಥಿತರಿದ್ದರು.