ಬೆಳಗಾವಿ:ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ವರ ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮತ್ತೆ ಮೂರು ಮಂದಿಯ ವರದಿ ನೆಗೆಟಿವ್: ಜಿಲ್ಲಾಧಿಕಾರಿ - Three cases reported in Belgaum
ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಲ್ಕು ಮಾದರಿಗಳ ಪೈಕಿ ಇನ್ನೊಂದು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ. ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿವೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ 15 ಮಾದರಿಗಳ ಪೈಕಿ ಇದೀಗ 14 ನೆಗೆಟಿವ್ ವರದಿ ಬಂದಿವೆ ಎಂದಿದ್ದಾರೆ.