ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಕಿಲ್ಲರ್ ಕೊರೊನಾಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಬಿಮ್ಸ್ ಸಿಬ್ಬಂದಿ ಸೇರಿದಂತೆ 27 ಜನರು ಸೋಂಕಿಗೆ ತುತ್ತಾಗಿದ್ದಾರೆ.
ಬೆಳಗಾವಿಯಲ್ಲಿ ಎರಡು ಬಲಿ: ಹೊಸದಾಗಿ 27 ಜನರಿಗೆ ಸೋಂಕು - ಬೆಳಗಾವಿ ಕೊರೊನಾ ಸೋಂಕಿತರ ಸಾವು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಕೂಡಾ ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ಕೋವಿಡ್ಗೆ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಮೃತರ ಸಂಖ್ಯೆ 14ಕ್ಕೆ ಹಾಗೂ ಸೋಂಕಿತರ ಸಂಖ್ಯೆ 497 ಕ್ಕೆ ಏರಿಕೆಯಾಗಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅಥಣಿಯ 72 ವರ್ಷ ವಯಸ್ಸಿನ ವೃದ್ಧ ಹಾಗೂ ಗೋಕಾಕ ನಗರದ 52 ವರ್ಷ ವಯಸ್ಸಿನ ವೃದ್ಧ ಚಿಕಿತ್ಸೆ ಫಲಿಸದೆ ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಮೃತರಾಗಿದ್ದಾರೆ.
ಅಥಣಿ ತಾಲೂಕಿನ 11, ಬೆಳಗಾವಿಯ ವಿವಿಧ ಬಡಾವಣೆಯ 13, ಗೋಕಾಕ, ರಾಮದುರ್ಗ, ಬೈಲಹೊಂಗಲ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.