ಕರ್ನಾಟಕ

karnataka

ETV Bharat / city

ಬೆಳಗಾವಿ ಚಿರತೆ ಸೆರೆಗೆ ಬರಲಿವೆ ಸಕ್ರೆಬೈಲ್​ ಆನೆಗಳು..

ಬೆಳಗಾವಿ ಗಾಲ್ಫ್​ ಮೈದಾನದಲ್ಲಿ ಕಣ್ಮರೆಯಾಗಿದ್ದ ಚಿರತೆ ಸೋಮವಾರ ಬೆಳಗ್ಗೆ ಸ್ಥಳೀಯರಿಗೆ ಕಾಣಿಸಿಕೊಂಡಿದೆ. ಈ ಮಾಹಿತಿಯ ಮೇರೆಗೆ ನುರಿತ ಅರವಳಿಕೆ ತಜ್ಞರು ಕಾರ್ಯಾಚರಣೆ ಮಡುತ್ತಿದ್ದಾರೆ ಎಂದು ಸಚಿವ ಉಮೇಶ ಕತ್ತಿ ಹೇಳಿದರು.

Umesh Katti
ಅರಣ್ಯ ಸಚಿವ ಉಮೇಶ ‌ಕತ್ತಿ

By

Published : Aug 22, 2022, 7:10 PM IST

ಬೆಳಗಾವಿ : ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಿಂದ ನಾಳೆ ಎರಡು ಆನೆಗಳನ್ನು ತರಿಸಿ ಚಿರತೆ ಕಾರ್ಯಾಚರಣೆ ನಡೆಸಲಾಗುವುದು. ಎರಡ್ಮೂರು ದಿನಗಳಲ್ಲಿ ಚಿರತೆ ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಸಚಿವ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಬೆಳಗಾವಿ ಜಿಲ್ಲೆಯ ನಾಲ್ಕು ಕಡೆ ಚಿರೆತೆಗಳ ಹಾವಳಿ ಕಂಡು ಬಂದಿದೆ. ಚಿಕ್ಕೋಡಿ ಭಾಗದಲ್ಲಿ ಕಂಡು ಬಂದಿದ್ದ ಚಿರತೆ ಅಥಣಿ ಮೂಲಕ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಇದೆ ಎಂದರು.

ಇದನ್ನೂ ಓದಿ :ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: 22 ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಣೆ

ಮೂಡಲಗಿ ಹಾಗೂ ಸವದತ್ತಿಯಲ್ಲಿ 10 ದಿನಗಳಿಂದ ಕಂಡು ಬಂದಿಲ್ಲ. ಬೆಳಗಾವಿ ಗಾಲ್ಫ್​ ಮೈದಾನದಲ್ಲಿ ಕಣ್ಮರೆಯಾಗಿದ್ದ ಚಿರತೆ ಸೋಮವಾರ ಬೆಳಗ್ಗೆ ಸ್ಥಳೀಯರಿಗೆ ಕಾಣಿಸಿಕೊಂಡಿದೆ. ಈ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ. ನುರಿತ ಅರವಳಿಕೆ ತಜ್ಞರು ಕಾರ್ಯಾಚರಣೆ ಮಡುತ್ತಿದ್ದಾರೆ ಎಂದು ಹೇಳಿದರು.

ಬೆಳಗಾವಿ ಚಿರತೆ ಸೆರೆಗೆ ಸಕ್ರೆಬೈಲಿನಿಂದ ಎರಡು ಆನೆಗಳನ್ನ ತರಲಾಗುತ್ತಿದೆ

ಬೆಳಗಾವಿ ಗಾಲ್ಫ್ ಮೈದಾನದಲ್ಲಿರುವ ಚಿರತೆಯನ್ನು ಸೆರೆ ಹಿಡಿಯಲು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಿಂದ ಎರಡೂ ಆನೆಗಳನ್ನು ಕರೆಸಲಾಗುತ್ತಿದೆ. 120 ಅರಣ್ಯ ಇಲಾಖೆ ಹಾಗೂ 80 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಭೆಯಲ್ಲಿ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಎಸ್​ಪಿ ಡಾ. ಸಂಜೀವ ಪಾಟೀಲ, ಎಸಿಎಫ್ ಮಲ್ಲಿನಾಥ ಕುಸನಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಆಪರೇಷನ್​ ಚಿರತೆ ವಿಫಲ: ಅರಣ್ಯಾಧಿಕಾರಿಗಳಿಂದ ತಪ್ಪಿಸಿಕೊಂಡು ಎಸ್ಕೇಪ್​ ಆದ ಚೀತಾ

ABOUT THE AUTHOR

...view details