ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ್ದ ನಂತರ ಸಿಎಂ ಜೊತೆ ಮುನಿಸಿಕೊಂಡಿದ್ದ ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡುವ ಭರವಸೆ ಬೆನ್ನಲ್ಲೇಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಚಿವ ಸ್ಥಾನದ ಭರವಸೆ: ಮುನಿಸು ಮರೆತು ಸಿಎಂ ಭೇಟಿಯಾದ ಕತ್ತಿ!
ಸಚಿವ ಸ್ಥಾನ ಕೈತಪ್ಪಿದ್ದ ನಂತರ ಸಿಎಂ ಜೊತೆ ಮುನಿಸಿಕೊಂಡಿದ್ದ ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡುವ ಭರವಸೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಎರಡು ತಿಂಗಳ ಹಿಂದೆ ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಯ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಹಿರಿಯರನ್ನು ಕಡೆಗಣಿಸಿ, ಸೋತ ಲಕ್ಷ್ಮಣ ಸವದಿಗೆ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಹುದ್ದೆ ಕೂಡ ನೀಡಿದ್ದು, ಪಕ್ಷದ ಕೆಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಇಷ್ಟೇ ಅಲ್ಲದೆ ಉಮೇಶ್ ಕತ್ತಿ ಕೂಡ ಪಕ್ಷದಿಂದ ದೂರ ಉಳಿದಿದ್ದರು.
ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿದ ಹಿನ್ನೆಲೆ ಕತ್ತಿ ಅವರನ್ನು ಹೋಟೆಲ್ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಡಿಸೆಂಬರ್ ಒಳಗೆ ಕತ್ತಿ ಅವರಿಗೆ ದೊಡ್ಡ ಹುದ್ದೆ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಉಮೇಶ್ ಕತ್ತಿ ತಮ್ಮ ಮುನಿಸು ಮರೆತು ಯಡಿಯೂರಪ್ಪ ತಂಗಿದ್ದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.